ಬೆಳಗಾವಿ: ನಿಮಗೆ ತಾಕತ್ತಿದ್ರೆ ಎಂಇಎಸ್ ನಿಷೇಧಿಸಿ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದೆ.
ಬೆಳಗಾವಿಯಲ್ಲಿ ಎಂಇಎಸ್ ಅಧ್ಯಕ್ಷ ದೀಪಕ್ ದಳವಿ ನೇತೃತ್ವದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದ್ದಲ್ಲದೇ, ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ಸರ್ಕಾರಕ್ಕೆ ಆಗುವುದಾದರೆ ಮಹಾಜನ್ ವರದಿಯನ್ವಯ ಗಡಿ ವಿವಾದ ಇತ್ಯರ್ಥ ಮಾಡಲಿ. ಮಹಾಜನ್ ವರದಿಯೇ ಅಂತಿಮ ಎಂದು ಕರ್ನಾಟಕ ಹೇಳುತ್ತಾ ಬಂದಿದೆ. ಈ ವರದಿ ಅನ್ವಯವೇ ಗಡಿ ವಿವಾದ ಬಗೆಹರಿಸಲು ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾಪ ಮಂಡಿಸಲಿ ಎಂದು ಎಂಇಎಸ್ ಮುಖಂಡರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಜನರೇ ಎಂಇಎಸ್ ಬ್ಯಾನ್ ಮಾಡಿದ್ದಾರೆ : ಗೃಹ ಸಚಿವ ಆರಗ ಜ್ಞಾನೇಂದ್ರ