ETV Bharat / city

ನಾಮಪತ್ರ ಸಲ್ಲಿಸಿದ ಮಹೇಶ್​ ಕುಮಠಳ್ಳಿ, ಜಾರಕಿಹೊಳಿ ಸಹೋದರರು - ಬೆಳಗಾವಿ ವಿಧಾನಸಭಾ ಕ್ಷೇತ್ರ

ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದ್ದು, ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಗೋಕಾಕ್​ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

Mahesh kumatalli and Lakhan jarakiholi
author img

By

Published : Nov 18, 2019, 1:17 PM IST

Updated : Nov 18, 2019, 1:54 PM IST

ಚಿಕ್ಕೋಡಿ/ಗೋಕಾಕ್​: ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿರುವುದರಿಂದ ಅಥಣಿ, ಕಾಗವಾಡ ಹಾಗೂ ಗೋಕಾಕ್​ ಕ್ಷೇತ್ರಗಳಲ್ಲಿ ಆಯಾ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಬಲಪ್ರದರ್ಶನ ಮಾಡಿದ್ದು ಕಂಡುಬಂತು.

ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹೇಶ್​ ಕುಮಟಳ್ಳಿ, ಅಥಣಿ ತಹಶೀಲ್ದಾರ್​ ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿ ಜೀಲಾನಿ ಮೋಕಾಸಿ ಮತ್ತು ಅಥಣಿ ತಹಶೀಲ್ದಾರ್​ ಎಮ್ ಎನ್ ಬಳ್ಳಿಗಾರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಡಿಸಿಎಮ್ ಲಕ್ಷ್ಮಣ ಸವದಿ, ಬೆಳಗಾವಿ ಉಸ್ತುವಾರಿ ಜಗದೀಶ್​ ಶೆಟ್ಟರ್​, ಮಹೇಶ ಟೆಂಗಿನಕಾಯಿ ಸಾಥ್​ ನೀಡಿದರು.

ಹಾಗೆಯೇ ಕಾಂಗ್ರೆಸ್​ ಅಭ್ಯರ್ಥಿ ಗಜಾನನ ಮಂಗಸೂಳಿ ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರಾದ ಎಂ. ಬಿ. ಪಾಟೀಲ್ ಇವರ ಜೊತೆಗೂಡಿ ಸಿದ್ದೇಶ್ವರ ದೇವಸ್ಥಾನದಿಂದ ಮಿನಿ ವಿಧಾನಸೌಧದವರೆಗೆ ಬೆಂಬಲಿಗರೊಂದಿಗೆ ಪಾದಯಾತ್ರೆ ಮಾಡಿದ ಕಾಂಗ್ರೆಸ್​ ಅಭ್ಯರ್ಥಿ​ ಗಜಾನನ ಮಂಗಸೂಳಿ ಚುನಾವಣಾ ಅಧಿಕಾರಿ ಜೆಲಾನಿ ಮೊಕಾಶಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತಾಡಿದ ಗಜಾನನ ಮಂಗಸೂಳಿ, ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಜಯಭೇರಿ ಆಗುವುದು ಖಚಿತ, ಪಕ್ಷಕ್ಕೆ ದ್ರೋಹ ಬಗೆದ ಮಹೇಶ್ ಕುಮಟಳ್ಳಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಹಾಗೆಯೇ ಕಾಗವಾಡ ಕ್ಷೇತ್ರದಿಂದ ಮಾಜಿ ಶಾಸಕ ರಾಜು ಕಾಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಕಾಗೆ ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ. ಪಾಟೀಲ್, ಈ ಉಪ ಚುನಾವಣೆ ಬೇಕಾಗಿರಲಿಲ್ಲ, ಬಿಜೆಪಿ ಕುತಂತ್ರದಿಂದ ಈ ಚುನಾವಣೆ ನಡೆಯುವಂತಾಯಿತು. ಅಥಣಿ ಹಾಗೂ ಕಾಗವಾಡ ಈ ಎರಡು ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ, ಅನರ್ಹ ಶಾಸಕರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು. ಬಳಿಕ ರಾಜು ಕಾಗೆ ಮಾತನಾಡಿ, ಗೆಲುವು ನಮ್ಮದೇ.. ಶ್ರೀಮಂತ ಪಾಟೀಲ್ ರೈತರಿಗೆ ಮೋಸ ಮಾಡುವ ವ್ಯಕ್ತಿ, ಅವರದು ಗೂಂಡಾ ಪ್ರವೃತ್ತಿ ಎಂದರು.

ಹಾಗೆಯೇ ಕಾಗವಾಡ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮಂತ ಪಾಟೀಲ್ ಕೂಡ ಇಂದು ನಾಮಪತ್ರ ಸಲ್ಲಿಸಿದರು. ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಜಗದೀಶ್ ಶೆಟ್ಟರ್ ಮುಂದಾಳತ್ವದಲ್ಲಿ ಹಾಗೂ ಸಾವಿರಾರು ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.

ರಮೇಶ್,​ ಲಖನ್​ ನಾಮಪತ್ರ ಸಲ್ಲಿಕೆ:

ಗೋಕಾಕ್​ ಕ್ಷೇತ್ರದ ಉಪಚುನಾವಣೆಯಲ್ಲಿ ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ‌ ಬಿಜೆಪಿ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದರು. ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್​ ಅಂಗಡಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ‌, ಕೊತ್ವಾಲಗೌಡ ಮತ್ತಿತರರು ರಮೇಶ ಜಾರಕಿಹೊಳಿ‌ಗೆ ಸಾಥ್ ನೀಡಿದರು.

ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು. ರಮೇಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಕೆಗೂ ಮೊದಲು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ಅಭ್ಯರ್ಥಿ ಲಖನ್​ಗೆ ಶಾಸಕ ಸತೀಶ ಜಾರಕಿಹೊಳಿ ಸಾಥ್ ನೀಡಿದರು. ಹಣಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಲಖನ್ ಜಾರಕಿಹೊಳಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಿ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೆರವಣಿಗೆ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ‌ಗೆ ಸೇಬಿನ ಹಾರ ಹಾಕಿ ಸ್ವಾಗತ ಮಾಡಿಕೊಳ್ಳಲಾಯಿತು. ಬಸವೇಶ್ವರ ವೃತ್ತದಲ್ಲಿ ಮೂರು ಕ್ವಿಂಟಲ್ ಸೇಬಿನ ಹಾರ ಸಿದ್ಧಪಡಿಸಲಾಗಿದ್ದು, ಕ್ರೇನ್ ಮೂಲಕ ಶಾಸಕ ಸತೀಶ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ‌ ಕೊರಳಿಗೆ ಸೇಬಿನಹಾರ ಹಾಕಲಾಯಿತು. ಬಳಿಕ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಸತೀಶ, ಲಖನ್ ಪರ ಘೋಷಣೆ ಕೂಗಿದರು.

ಗೋಕಾಕ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅಂದಾಜು 10 ಸಾವಿರ ಕಾಂಗ್ರೆಸ್ ‌ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೋಕಾಕ್​ ಕ್ಷೇತ್ರದಲ್ಲಿ ಎಲ್ಲಿ ನೋಡಿದರಲ್ಲಿ ಕಾಂಗ್ರೆಸ್ ಭಾವುಟಗಳೇ ರಾರಾಜಿಸುತ್ತಿದ್ದವು.‌ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಡೋಲ್ ತಾಶಾ, ಬಾಝಾ ಭಜಂತ್ರಿಗೆ ಕುಣಿದು ಕುಪ್ಪಳಿಸಿದರು.

Intro:ಬೃಹತ್ ರ್ಯಾಲಿ ಮೂಲಕ ಸಾಗಿ ಲಖನ್ ಜಾರಕಿಹೊಳಿ ನಾಮಪತ್ರ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸುತ್ತಿದ್ದು, ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ. ಅಭ್ಯರ್ಥಿ ಲಖನ್ ಗೆ ಶಾಸಕ ಸತೀಶ ಜಾರಕಿಹೊಳಿ ಸಾಥ್ ನೀಡಿದ್ರು.
ಇಲ್ಲಿನ ಕೊಳವಿ ಹಣಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಲಖನ್ ಜಾರಕಿಹೊಳಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ. ಸಂಗೋಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿಲ ಮಧ್ಯಾಹ್ನ 1 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಗೋಕಾಕ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಹೀಗಾಗಿ ನಾಮಪತ್ರ ಸಲ್ಲಿಕೆ ವೇಳೆ ಅಂದಾಜು ೧೦ ಸಾವಿರ ಕಾಂಗ್ರೆಸ್ ‌ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೋಕಾಕ ಕ್ಷೇತ್ರದಲ್ಲಿ ಎಲ್ಲಿ ನೋಡಿದರಲ್ಲಿ ಕಾಂಗ್ರೆಸ್ ಭಾವುಟಗಳೇ ರಾರಾಜಿಸುತ್ತಿದ್ದವು.‌ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಡೋಲ್ ತಾಶಾ, ಬಾಝಾ ಭಜಂತ್ರಿಗೆ ಕುಣಿದು ಕುಪ್ಪಳಿಸಿದ್ರು.
ಬಿಗಿ ಬಂದೋಬಸ್ತ್: ಕಾಂಗ್ರೆಸ್,ಜೆಡಿಎಸ್,ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದು, ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
--
KN_BGM_04_18_Congress_Nomination_Rally_7201786

KN_BGM_04_18_Congress_Nomination_Rally_visual_1 Body:ಬೃಹತ್ ರ್ಯಾಲಿ ಮೂಲಕ ಸಾಗಿ ಲಖನ್ ಜಾರಕಿಹೊಳಿ ನಾಮಪತ್ರ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸುತ್ತಿದ್ದು, ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ. ಅಭ್ಯರ್ಥಿ ಲಖನ್ ಗೆ ಶಾಸಕ ಸತೀಶ ಜಾರಕಿಹೊಳಿ ಸಾಥ್ ನೀಡಿದ್ರು.
ಇಲ್ಲಿನ ಕೊಳವಿ ಹಣಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಲಖನ್ ಜಾರಕಿಹೊಳಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ. ಸಂಗೋಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿಲ ಮಧ್ಯಾಹ್ನ 1 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಗೋಕಾಕ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಹೀಗಾಗಿ ನಾಮಪತ್ರ ಸಲ್ಲಿಕೆ ವೇಳೆ ಅಂದಾಜು ೧೦ ಸಾವಿರ ಕಾಂಗ್ರೆಸ್ ‌ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೋಕಾಕ ಕ್ಷೇತ್ರದಲ್ಲಿ ಎಲ್ಲಿ ನೋಡಿದರಲ್ಲಿ ಕಾಂಗ್ರೆಸ್ ಭಾವುಟಗಳೇ ರಾರಾಜಿಸುತ್ತಿದ್ದವು.‌ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಡೋಲ್ ತಾಶಾ, ಬಾಝಾ ಭಜಂತ್ರಿಗೆ ಕುಣಿದು ಕುಪ್ಪಳಿಸಿದ್ರು.
ಬಿಗಿ ಬಂದೋಬಸ್ತ್: ಕಾಂಗ್ರೆಸ್,ಜೆಡಿಎಸ್,ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದು, ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
--
KN_BGM_04_18_Congress_Nomination_Rally_7201786

KN_BGM_04_18_Congress_Nomination_Rally_visual_1 Conclusion:ಬೃಹತ್ ರ್ಯಾಲಿ ಮೂಲಕ ಸಾಗಿ ಲಖನ್ ಜಾರಕಿಹೊಳಿ ನಾಮಪತ್ರ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸುತ್ತಿದ್ದು, ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ. ಅಭ್ಯರ್ಥಿ ಲಖನ್ ಗೆ ಶಾಸಕ ಸತೀಶ ಜಾರಕಿಹೊಳಿ ಸಾಥ್ ನೀಡಿದ್ರು.
ಇಲ್ಲಿನ ಕೊಳವಿ ಹಣಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಲಖನ್ ಜಾರಕಿಹೊಳಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ. ಸಂಗೋಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿಲ ಮಧ್ಯಾಹ್ನ 1 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಗೋಕಾಕ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಹೀಗಾಗಿ ನಾಮಪತ್ರ ಸಲ್ಲಿಕೆ ವೇಳೆ ಅಂದಾಜು ೧೦ ಸಾವಿರ ಕಾಂಗ್ರೆಸ್ ‌ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೋಕಾಕ ಕ್ಷೇತ್ರದಲ್ಲಿ ಎಲ್ಲಿ ನೋಡಿದರಲ್ಲಿ ಕಾಂಗ್ರೆಸ್ ಭಾವುಟಗಳೇ ರಾರಾಜಿಸುತ್ತಿದ್ದವು.‌ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಡೋಲ್ ತಾಶಾ, ಬಾಝಾ ಭಜಂತ್ರಿಗೆ ಕುಣಿದು ಕುಪ್ಪಳಿಸಿದ್ರು.
ಬಿಗಿ ಬಂದೋಬಸ್ತ್: ಕಾಂಗ್ರೆಸ್,ಜೆಡಿಎಸ್,ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದು, ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
--
KN_BGM_04_18_Congress_Nomination_Rally_7201786

KN_BGM_04_18_Congress_Nomination_Rally_visual_1
Last Updated : Nov 18, 2019, 1:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.