ಅಥಣಿ: ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧವಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.
ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ ಮಹೇಶ ಕುಮಟಳ್ಳಿ, ಹದಿನಾಲ್ಕು ತಿಂಗಳ ಕಾಲ ಏನಾಗಿದೆ ಅನ್ನುವುದು ನನ್ನ ಕ್ಷೇತ್ರದ ಜನರಿಗೆ ತಿಳಿದಿದೆ ಎಂದರು. ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಅಥಣಿ ಮತ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ. ಸದ್ಯ ಹಳೆಯ ವಿಷಯಗಳನ್ನು ನಾನು ಮಾತನಾಡುವುದಿಲ್ಲ ಎಂದು ಹೇಳಿದರು.