ಬೆಳಗಾವಿ: ತನ್ನಿಬ್ಬರು ಹೆಣ್ಣು ಮಕ್ಕಳಿಗೆ ವಿಷ ನೀಡಿದ ತಂದೆ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಕೆ.ಎಚ್ ಕಂಗ್ರಾಳಿ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಇಬ್ಬರೂ ಪುತ್ರಿಯರು ಮೃತರಾಗಿದ್ದಾರೆ. ವಿಷ ನೀಡಿದ ತಂದೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ತಂದೆ ಅನಿಲ್ ಬಾಂದೇಕರ್ (45) ಪರಿಸ್ಥಿತಿ ಗಂಭೀರವಾಗಿದೆ. ಮಕ್ಕಳಾದ ಅಂಜಲಿ (8), ಅನನ್ಯಾ(4) ಮೃತ ದುರ್ದೈವಿಗಳು. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಅನಿಲ್ ಬಾಂದೇಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಿಲ್ ಬೆಳಗಾವಿಯ ವಿಜಯನಗರದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳಗಾವಿ: ಇಬ್ಬರು ಹೆಣ್ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ - ಇಬ್ಬರು ಮಕ್ಕಳು ಸಾವು
ಪುಟ್ಟ ಇಬ್ಬರು ಮಕ್ಕಳಿಗೆ ವಿಷ ನೀಡಿದ ತಂದೆ ತಾನು ಕೂಡಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.