ಚಿಕ್ಕೋಡಿ : ಗಡಿ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಇರಿಸು-ಮುರಿಸು ಉಂಟಾಗಿದೆ. ಈ ನಡುವೆಯೇ ಸಚಿವೆ ಶಶಿಕಲಾ ಜೊಲ್ಲೆ ಕ್ಷೇತ್ರವಾದ ನಿಪ್ಪಾಣಿ ಮತಕ್ಷೇತ್ರದಲ್ಲಿ ಒಂದೇ ಒಂದು ಕನ್ನಡ ಪದ ಬಳಕೆ ಮಾಡದೇ ಸಂಪೂರ್ಣ ಮರಾಠಿಯಲ್ಲೇ ಸ್ವಾಗತ ಕೋರಿ ಫ್ಲೆಕ್ಸ್ಗಳನ್ನು ಹಾಕಲಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ಸಿಎಂ ಗಡಿ ವಿಚಾರದಲ್ಲಿ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಅನಾವಶ್ಯಕವಾಗಿ ಗಡಿ ವಿಚಾರದ ಬಗ್ಗೆ ತಗಾದೆ ತೆಗೆಯುತ್ತಿರುವ ವೇಳೆಯೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ಬಸ್ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಹಾಕಲಾಗಿರುವ ಫ್ಲೆಕ್ಸ್ಗಳಲ್ಲಿ ಕನ್ನಡ ಪದ ಬಳಕೆ ಮಾಡದೇ, ಮರಾಠಿಯಲ್ಲೇ ಹಾಕಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಸ್ವಾಗತ ಕೋರಿ ಮರಾಠಿ ಭಾಷೆಯಲ್ಲಿ ಪ್ಲೇಕ್ಸ್ ಹಾಕಲಾಗಿದೆ.