ETV Bharat / city

ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಗೋಕಾಕನಲ್ಲಿ ಬೃಹತ್ ಪ್ರತಿಭಟನೆ - Massive protests in Gokhak

ಡಿ.ಕೆ. ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ‌ ಬೆಂಬಲಿಗರು ಗೋಕಾಕ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೃಹತ್ ಪ್ರತಿಭಟನೆ
ಬೃಹತ್ ಪ್ರತಿಭಟನೆ
author img

By

Published : Mar 28, 2021, 12:32 PM IST

ಬೆಳಗಾವಿ: ರಮೇಶ್ ಜಾರಕಿಹೊಳಿ‌ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಡಿ.ಕೆ. ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ‌ ಬೆಂಬಲಿಗರು ಗೋಕಾಕ​ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ರಮೇಶ್ ಜಾರಕಿಹೊಳಿ‌ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ

ಡಿಕೆಶಿ ಅಣಕು ಶವಯಾತ್ರೆ ಮಾಡಿ, ಡಿಕೆಶಿಗೆ ಧಿಕ್ಕಾರ ಬ್ಯಾನರ್ ಹಿಡಿದು ರಮೇಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ರಾಸಲೀಲೆ ಸಿಡಿ ಪ್ರಕರಣ ಹೊರಬರುತ್ತಿದ್ದಂತೆ ರಮೇಶ್ ಜಾರಕಿಹೊಳಿ‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಮೇಶ್ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಗೋಕಾಕ​ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ ಅಣಕು ಶವಯಾತ್ರೆ ಹಾಗೂ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದವರೆಗೆ ತೆರಳಲಿದೆ. ಸಾವಿರಾರು ಜನ ರಮೇಶ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ 500ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.