ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿದರು.
ಜಲಾವೃತಗೊಂಡಿರುವ ಮನೆಗಳ ಕುಟುಂಬಗಳಿಗೆ ಆಹಾರ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಮನೆ ಕಳೆದುಕೊಂಡ ಕುಟುಂಬಗಳಿಗೆ ಸೂಕ್ತ ಸ್ಥಳ ಒದಗಿಸಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.