ETV Bharat / city

ಬೆಳಗಾವಿ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಗೆಲುವು ನಿಶ್ಚಿತ: ಸಚಿವ ಶ್ರೀಮಂತ ಪಾಟೀಲ - ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ

ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ನನಗೆ ಬಸವಕಲ್ಯಾಣ ಹಾಗೂ ಬೆಳಗಾವಿ ಪ್ರಚಾರದ ಜವಾಬ್ದಾರಿ ನೀಡಿದ್ದಾರೆ. ಇಂದು ಮಸ್ಕಿಯಲ್ಲಿ ಮರಾಠ ಸಮಾಜದ ಗಣ್ಯರ ಜೊತೆ ಸಭೆ ಏರ್ಪಡಿಸಲಾಗಿದೆ. ಉಪಚುನಾವಣೆ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲಿದ್ದೇವೆ ಎಂದು ಸಚಿವ ಶ್ರೀಮಂತ ಪಾಟೀಲ ಹೇಳಿದರು.

Minister Shrimanta Patil
ಸಚಿವ ಶ್ರೀಮಂತ ಪಾಟೀಲ
author img

By

Published : Apr 13, 2021, 3:43 PM IST

ಚಿಕ್ಕೋಡಿ: ಬೆಳಗಾವಿ ಲೋಕಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎರಡು ಪಕ್ಷಗಳ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಬೆಳಗಾವಿ ಗ್ರಾಮೀಣ ಹಾಗೂ ಸುತ್ತಮುತ್ತಲಿನ ತಾಲೂಕಿನಲ್ಲಿ ನಾನು ಪ್ರಚಾರ ಕೈಗೊಂಡಿದ್ದು, ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಗೆಲ್ಲುವುದು ನಿಶ್ಚಿತ ಎಂದು ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಬೆಳಗಾವಿ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಗೆಲುವು ನಿಶ್ಚಿತ: ಸಚಿವ ಶ್ರೀಮಂತ ಪಾಟೀಲ

ಕಾಗವಾಡ ತಾಲೂಕಿನಲ್ಲಿ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಅವರು, ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ನನಗೆ ಬಸವಕಲ್ಯಾಣ ಹಾಗೂ ಬೆಳಗಾವಿ ಪ್ರಚಾರದ ಜವಾಬ್ದಾರಿ ನೀಡಿದ್ದಾರೆ. ಇಂದು ಮಸ್ಕಿಯಲ್ಲಿ ಮರಾಠ ಸಮಾಜದ ಗಣ್ಯರ ಜೊತೆ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಉಪಚುನಾವಣೆ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು.

ಬೆಳಗಾವಿ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಭಾಗಿಯಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಮೇಶ್ ಭಾಗಿಯಾಗುತ್ತಾರೋ, ಇಲ್ಲವೋ ನನಗೆ ಗೊತ್ತಿಲ್ಲ ಎಂದರು. ಇನ್ನು, ನಮ್ಮ ಸರ್ಕಾರ ನೆರೆ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಿದೆ. ಕೊವೀಡ್ ವೇಳೆ ಎಲ್ಲ ರಾಜ್ಯಕ್ಕಿಂತ ಹೆಚ್ಚು ಜನಪರ ಕೆಲಸಗಳನ್ನು‌ ಮಾಡಿರುವ ಹೆಮ್ಮೆ ನಮಗಿದೆ. ಇವೆಲ್ಲವೂಗಳನ್ನು ಇಟ್ಟುಕೊಂಡು ಬಿಜೆಪಿಗೆ ಮತ ಹಾಕಿ ಎಂದು ಕೇಳುತ್ತೇವೆ ಎಂದರು.

ಓದಿ: ಉಪಚುನಾವಣೆ ಬಳಿಕ ಸರ್ಕಾರ ಪತನ ಹುಚ್ಚು ಭ್ರಮೆಯಷ್ಟೇ: ಕಾಂಗ್ರೆಸ್​​ಗೆ ಶೆಟ್ಟರ್ ತಿರುಗೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.