ಬೆಳಗಾವಿ: ಬೆಳಗಾವಿಯಲ್ಲಿ ಪಕ್ಷಕ್ಕೆ ಉಂಟಾದ ಸೋಲು ಅನಿರೀಕ್ಷಿತ ಹಿನ್ನಡೆ ಎಂದು ಸಚಿವ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬೆಳಗಾವಿ ಸೋಲಿನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಸೋಲಿಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು.
ಯಾರ ವಿರುದ್ಧ ಕ್ರಮ ಕೈಗೊಳ್ಳಬೇಕು, ಯಾರ ವಿರುದ್ಧ ಬೇಡ ಎನ್ನುವ ಬಗ್ಗೆ ಈಗಲೇ ತಿಳಿಸಲು ಸಾಧ್ಯವಿಲ್ಲ. ಪಕ್ಷದ ಎಲ್ಲ ನಾಯಕರು ಸೇರಿ ಒಮ್ಮತದ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿರಿ: 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ; ಸತೀಶ್ ಜಾರಕಿಹೊಳಿ ವಿಶ್ವಾಸ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಜನ ಬೆಂಬಲ ನೀಡಿದ್ದಾರೆ. ಉತ್ತಮ ಫಲಿತಾಂಶವನ್ನು ರಾಜ್ಯ ನೀಡಿದೆ. ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿ ಬದಲಾಗುತ್ತಾರೆಂಬ ಮಾತಿಗೆ ಅರ್ಥವಿಲ್ಲ. 2023ರವರೆಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿಯೇ ಹೋಗುತ್ತೇವೆ. ಬೆಂಗಳೂರು ನಗರದ ಉಸ್ತುವಾರಿಯನ್ನು ನನಗೆ ನೀಡಿದರೆ ನಿಭಾಯಿಸುತ್ತೇನೆ. ನೀಡುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿರುವ ಪರಮಾಧಿಕಾರ ಎಂದು ಹೇಳಿದರು.