ETV Bharat / city

ಭತ್ತ ನಾಟಿ ಮಾಡಿ ಆತ್ಮ ಯೋಜನೆ ಕಾರ್ಯಕ್ರಮಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್​ ಚಾಲನೆ - ಭತ್ತ ನಾಟಿ ಮಾಡಿದ ಶಾಸಕಿ ಅಂಜಲಿ ನಿಂಬಾಳ್ಕರ್​​

ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆಯ 2020-21ನೇ ಸಾಲಿನ ಆತ್ಮ ಯೋಜನೆಯಡಿ ಕಾರ್ಯಕ್ರಮಕ್ಕೆ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.

author img

By

Published : Jul 9, 2020, 6:05 PM IST

ಬೆಳಗಾವಿ: ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದಲ್ಲಿ ಸಮಗ್ರ ಕೃಷಿ ಪದ್ಧತಿಯ ಪ್ರಾತ್ಯಕ್ಷಿಕೆ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆಯ ಆತ್ಮ ಯೋಜನೆಯಡಿ ಭತ್ತ ನಾಟಿ ಕಾರ್ಯಕ್ರಮಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.

ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆಯ 2020-21ನೇ ಸಾಲಿನ ಆತ್ಮ ಯೋಜನೆ ಕಾರ್ಯಕ್ರಮಕ್ಕೆ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು. ಈ ಯೋಜನೆಯಡಿ ಕೃಷಿ ಹೊಂಡದ ಬದುಗಳ ಮೇಲೆ ಮೇವಿನ ಬೆಳೆ ಬೆಳೆಯುವುದು, ಹಣ್ಣಿನ ಸಸ್ಯಗಳನ್ನು ಹಾಗೂ ಅರಣ್ಯೇತರ ಸಸ್ಯಗಳನ್ನು ನೆಡುವುದು, ಕೃಷಿ ಹೊಂಡದಲ್ಲಿ ಮೀನು ಸಾಕಣೆ ಮಾಡುವ ವಿಧಾನ, ನಿರ್ವಹಣೆಯ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು. ಶಾಸಕಿ ಅಂಜಲಿ ನಿಂಬಾಳ್ಕರ್ ಬದುಗಳ ಮೇಲೆ ತೆಂಗಿನ ಸಸಿಗಳನ್ನು ನೆಟ್ಟು ಸಂತಸ ವ್ಯಕ್ತಪಡಿಸಿ, ರೈತರಿಗೆ ‌ಸರ್ಕಾರದ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು. ಈ ವೇಳೆ ತರಬೇತಿ ಪಡೆದ ರೈತರಿಗೆ ಪ್ರಮಾಣಪತ್ರ, ಪ್ರಾತ್ಯಕ್ಷಿಕೆ ಕಿಟ್​ಗಳನ್ನು ವಿತರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.