ETV Bharat / city

ಸಚಿವ ಕತ್ತಿ ನೇತೃತ್ವದಲ್ಲಿ ನಡೆದ ಬಿಜೆಪಿ ನಾಯಕರ ರಹಸ್ಯ ಸಭೆ ಅಧಿಕೃತವಲ್ಲ.. ಬಾಲಚಂದ್ರ ಜಾರಕಿಹೊಳಿ ತಿರುಗೇಟು - BJP leaders Secret meeting

ಜಿಲ್ಲೆಯಲ್ಲಿ ಯಾರು?, ಎಷ್ಟು? ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಚೆನ್ನಾಗಿ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತಾ ಹೋದರೆ ಅದಕ್ಕೆಲ್ಲ ಉತ್ತರ ನೀಡುವ ಗೋಜಿಗೆ ಹೋಗುವುದಿಲ್ಲ. 2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ..

ಬಾಲಚಂದ್ರ ಜಾರಕಿಹೊಳಿ,  ಲಕ್ಷ್ಮಣ ಸವದಿ ಹಾಗೂ  ಉಮೇಶ್ ಕತ್ತಿ

author img

By

Published : Jan 24, 2022, 2:04 PM IST

ಬೆಳಗಾವಿ : ಸಚಿವ ಉಮೇಶ್ ಕತ್ತಿ ಹಾಗೂ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ನಾಯಕರ ರಹಸ್ಯ ಸಭೆಗೆ ಕೆಎಂಎಫ್ ‌ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉದ್ಧೇಶ ಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ ಅಧಿಕೃತ ಸಭೆಯೂ ಅಲ್ಲ. ಹೀಗಾಗಿ, ಈ ಸಭೆಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಜಿಲ್ಲೆಯಲ್ಲಿ ಯಾರು?, ಎಷ್ಟು? ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಚೆನ್ನಾಗಿ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತಾ ಹೋದರೆ ಅದಕ್ಕೆಲ್ಲ ಉತ್ತರ ನೀಡುವ ಗೋಜಿಗೆ ಹೋಗುವುದಿಲ್ಲ. 2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ.

ಜಿಲ್ಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಬಲವರ್ಧನೆಗೊಳಿಸಲು ಎಲ್ಲ ರೀತಿಯ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸಲು ನಾನು ಯತ್ನಾಳ್ ಎಷ್ಟು ಪ್ರಯತ್ನ ಮಾಡಿದ್ದೇವೆ ಗೊತ್ತಾ?: ಸರ್ಕಾರದ ವಿರುದ್ಧ ರೇಣುಕಾಚಾರ್ಯ ಕಿಡಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.