ETV Bharat / city

ಕೊರೊನಾದಿಂದ ಶಾಸಕಿ ಹೆಬ್ಬಾಳ್ಕರ್ ಗುಣಮುಖ: ಮೇ 5ರ ವರೆಗೆ ಹೋಂ ಕ್ವಾರಂಟೈನ್ - ಶಾಸಕಿ ಹೆಬ್ಬಾಳ್ಕರ್

ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹಾಗಾಗಿ ಕೆಲವು ದಿನ ಮನೆಯಲ್ಲೇ ಚಿಕಿತ್ಸೆ ಪಡೆದು ನಂತರ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿರುವ ಅವರು ಮೇ 5ರ ವರೆಗೆ ಹೋಂ ಕ್ವಾರಂಟೈನ್​ನಲ್ಲಿರಲಿದ್ದಾರೆ.

Hebbalkar
Hebbalkar
author img

By

Published : Apr 26, 2021, 3:24 PM IST

ಬೆಳಗಾವಿ: ಕೊರೊನಾ ಸೋಂಕಿನಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮೇ 5ರ ವರೆಗೆ ಹೋಂ ಕ್ವಾರಂಟೈನ್ ಆಗಲಿದ್ದಾರೆ.

ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹಾಗಾಗಿ ಕೆಲವು ದಿನ ಮನೆಯಲ್ಲೇ ಚಿಕಿತ್ಸೆ ಪಡೆದು ನಂತರ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು.

ಇದೀಗ ಕೊರೊನಾ ನೆಗೆಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಮೇ 5ರ ವರೆಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ, ಸಾರ್ವಜನಿಕರನ್ನು ಭೇಟಿ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.

ಹಾಗಾಗಿ ಮೇ 5ರ ವರೆಗೆ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಹಾಗೂ ವೈದ್ಯರ ಸಲಹೆಯಂತೆ ತಮ್ಮ ಹಾಗೂ ತಮ್ಮ ಕುಟುಂಬದ ಭೇಟಿಗೆ ಯಾರೂ ಬರಬಾರದು. ಎಲ್ಲರೂ ಮನೆಯಲ್ಲೇ ಇದ್ದು, ಸುರಕ್ಷಿತರಾಗಿರಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಮನವಿ ಮಾಡಿದ್ದಾರೆ.

ಕೊರೊನಾವನ್ನು ಯಾರೂ ಲಘುವಾಗಿ ಪರಿಗಣಿಸಬಾರದು. ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲೇ ಇರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರ ಕೆಲವು ದಿನ ಲಾಕ್ ಡೌನ್ ಮಾಡಬೇಕು. ಇಲ್ಲವಾದಲ್ಲಿ ಇಂತಹ ಗಂಭೀರ ಪರಿಸ್ಥಿತಿಯಂದ ಜನರನ್ನು ಕಾಪಾಡುವುದು ಕಷ್ಟ ಎಂದು ಹೆಬ್ಬಾಳ್ಕರ್ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ನಮ್ಮ ಕುಟುಂಬದ ಸದಸ್ಯರು ಹಾಗೂ ಸಹಾಯಕರು ಸೇರಿ 18 ಜನರಿಗೆ ಕೊರೊನಾ ಬಂದಿತ್ತು. ಕೆಲವರು ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನೂ ಕೆಲವರಿಗೆ 6 ದಿನಗಳ ಹಿಂದೆ ಪರಿಸ್ಥಿತಿ ನೋಡಿ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಹಾಗಾಗಿ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದೇವೆ ಎಂದು ಶಾಸಕಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.