ಬೆಳಗಾವಿ : ಜಿಲ್ಲೆಯ ಯುವನಾಯಕ ಮೃಣಾಲ ಹೆಬ್ಬಾಳ್ಕರ್ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ ಹೆಬ್ಬಾಳ್ಕರ್, ವಿದ್ಯಾರ್ಥಿ ಕಾಂಗ್ರೆಸ್ನಲ್ಲಿ ಮತ್ತು ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ.
ಇಂದು ಎಐಸಿಸಿ ಯುವ ಕಾಂಗ್ರೆಸ್ ನೂನತ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೃಣಾಲ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.