ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ಘಟಪ್ರಭಾ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಇದನ್ನು ಗಮನಿಸದೇ ಬಂದ ಬೈಕ್ ಸವಾರ ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಾಂಪುರ ಗ್ರಾಮದ ಅರ್ಜುನ ಲಮಾಣಿ (28) ಮೃತ ವ್ಯಕ್ತಿ. ದಾಂಡೇಲಿಯ ಸುಖದೇವ ಬಾಳೇಶಗೋಳ (39) ಮತ್ತು ಉತ್ತರಪ್ರದೇಶ ಗೋರಖಪುರದ ಅತುಲ್ ಸಗಾಡೆ (20) ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.