ಬೆಳಗಾವಿ : ಈಗಾಗಲೇ ಕರ್ನಾಟಕದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದು, ನದಿ ನೀರು ಹಂಚಿಕೆ ವಿಳಂಬವಾಗುತ್ತಿರುವ ನಿಟ್ಟಿನಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀವ್ರ ಬರಗಾಲದಿಂದ ತತ್ತರಿಸಿರುವ ಕೃಷ್ಣಾ ನದಿ ಭಾಗದ ಜನತೆಗೆ ಪ್ರತಿ ವರ್ಷವೂ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಇಂದು ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ ಎಂದರು.
ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆ ನೋಟಿಫಿಕೇಷನ್ ಹೊರಡಿಸಿದ ದಿನವೇ ಕಾಮಗಾರಿ ಆರಂಭ ಮಾಡುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.