ಬೆಳಗಾವಿ: ನಗರದ ಚೆನ್ನಮ್ಮ ವೃತ್ತದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯರು ಹಾಗೂ ಮಹಿಳೆಯರನ್ನು ಮಕ್ಕಳ ರಕ್ಷಣಾ ಸಮಿತಿ ಸಿಬ್ಬಂದಿ ಪೊಲೀಸರ ಸಹಕಾರದೊಂದಿಗೆ ರಕ್ಷಣೆ ಮಾಡಿ ವಶಕ್ಕೆ ಪಡೆದುಕೊಂಡರು.
ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್, ಕೊಲ್ಲಾಪುರ ಸರ್ಕಲ್, ಚೆನ್ನಮ್ಮ ವೃತ್ತ ಸೇರಿದಂತೆ ನಗರದ ವಿವಿಧೆಡೆ ಕಾರ್ಯಾಚರಣೆಗಿಳಿದ ಮಕ್ಕಳ ರಕ್ಷಣಾ ಸಮಿತಿ ಸಿಬ್ಬಂದಿ, ಅಧಿಕಾರಿಗಳು ಪೊಲೀಸರ ಜೊತೆಗೂಡಿ ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯರು ಹಾಗೂ ಮಹಿಳೆಯರು ಸೇರಿದಂತೆ ಐದಕ್ಕಿಂತ ಹೆಚ್ಚು ಹೆಚ್ಚು ಮಂದಿಯನ್ನು ವಶಕ್ಕೆ ಪಡೆದುಕೊಂಡು ಶಿವಾಜಿ ನಗರದಲ್ಲಿರುವ ರಿಮೈಂಡ್ ಹೋಮ್‍ಗೆ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು.
ನಗರದ ಚೆನ್ನಮ್ಮ ವೃತ್ತದ ಬಳಿ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಇಂದು ಏಕಾಏಕಿ ಮಕ್ಕಳ ರಕ್ಷಣಾ ಸಮಿತಿ ಸಿಬ್ಬಂದಿ ದಾಳಿ ನಡೆಸಿದ್ದಾರೆ.