ETV Bharat / city

ರಾಯಭಾಗ, ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ.. ಎಂಇಎಸ್ ನಿಷೇಧಕ್ಕೆ ಆಗ್ರಹ!

author img

By

Published : Dec 31, 2021, 5:18 PM IST

ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದರು. ಇನ್ನು ಕನ್ನಡಿಗರ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರೋಧಿ ನೀತಿ ಅನುಸರಿಸಿದ್ದಾರೆ, ಜೋಶಿ ಹತ್ತು ತಲೆ ರಾವಣ ಎಂದು ಆರೋಪಿಸಿದರು..

protest against MES at belagavi and hubli
ರಾಯಭಾಗ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಬೆಳಗಾವಿ/ಧಾರವಾಡ : ರಾಯಭಾಗದಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಎಂಇಎಸ್ ಮುಖಂಡ ಶುಭಂ ಶಳಕೆ ಶವಯಾತ್ರೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ‌.

ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ‌ ನಡೆಸಲಾಯಿತು. ಈ ವೇಳೆ ಎಂಇಎಸ್ ಸಂಘಟನೆ ವಿರುದ್ಧ ಕನ್ನಡಪರ ಸಂಘಟನೆಗಳು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ರಾಯಭಾಗದ ಪ್ರಮುಖ ಬೀದಿಗಳಲ್ಲಿ ಯಮನ ವೇಷಧಾರಿಯೊಬ್ಬರು ಎಂಇಎಸ್ ಮುಖಂಡ ಶುಭಂ ಶಳಕೆ ಶವ ಯಾತ್ರೆಗೆ ಹಗ್ಗ ಕಟ್ಟಿ ನಡುರಸ್ತೆಯಲ್ಲಿಯೇ ಎಳೆದುಕೊಂಡು ಹೋಗಿ ಆಕ್ರೋಶ ವ್ಯಕ್ತಪಡಿಸಿದರು‌.

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

ಇದಕ್ಕೂ ಮೊದಲು ಬಸವಣ್ಣ, ರಾಯಣ್ಣ, ಶಿವಾಜಿ, ಅಂಬೇಡ್ಕರ್ ಸೇರಿ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ ಎಂಬ ಸಂದೇಶ ರವಾನೆ ಮಾಡಿದರು.

ಶಿವಾಜಿ ಮಹಾರಾಜರ ಹೆಸರಿಟ್ಟುಕೊಂಡು ಕರ್ನಾಟಕದಲ್ಲಿ ಶಾಂತಿ ಕದಡುವ ಯತ್ನ ಮಾಡಲಾಗುತ್ತಿದೆ. ಅಂತಹ ಪುಂಡ ಸಂಘಟನೆಗಳನ್ನು ಹಾಗೂ ನಾಡಿಗೆ ದ್ರೋಹ ಬಗೆಯುವ ಎಂಇಎಸ್ ಪುಂಡರನ್ನು ಮಟ್ಟ ಹಾಕಬೇಕೆಂದು ಒತ್ತಾಯಿಸಿದರು.

ಹುಬ್ಬಳ್ಳಿಯಲ್ಲೂ ಪ್ರತಿಭಟನೆ : ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಎಂಇಎಸ್ ಸಂಘಟನೆ ವಿರುದ್ಧ ಈ ಭಾಗದ ಜನಪ್ರತಿನಿಧಿಗಳು ಧ್ವನಿ ಎತ್ತಿಲ್ಲ ಎಂದು ಆರೋಪಿಸಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲದ ಅಧಿವೇಶನ ನಡೆಸಲಾಯಿತು. ಈ ವೇಳೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು ರಾಜಕೀಯ ನಾಯಕರು ತಿಳಿಸಿದ್ದರು.

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

ಆದರೆ, ಸದನದಲ್ಲಿ ಈ ಭಾಗದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ಆಗಲಿಲ್ಲ. ಅಲ್ಲದೇ ಈ ಭಾಗದ ಜನಪ್ರತಿನಿಧಿಗಳು ಎಂಇಎಸ್ ಸಂಘಟನೆ ವಿರುದ್ಧ ಧ್ವನಿ ಎತ್ತಲಿಲ್ಲ. ಗಡಿನಾಡಿನಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಇದನ್ನೂ ಓದಿ: ಕನ್ನಡ ಪರ ಸಂಘಟನೆಗಳಿಂದ ಬಂದ್‌ ಬದಲು ಸಾಂಕೇತಿಕ ಪ್ರತಿಭಟನೆ.. ಜಾಥಾಗೆ ಮುಂದಾದ ವಾಟಾಳ್​, ಸಾ ರಾ ಗೋವಿಂದ್‌ ಖಾಕಿ ವಶಕ್ಕೆ

ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದರು. ಇನ್ನು ಕನ್ನಡಿಗರ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರೋಧಿ ನೀತಿ ಅನುಸರಿಸಿದ್ದಾರೆ, ಜೋಶಿ ಹತ್ತು ತಲೆ ರಾವಣ ಎಂದು ಆರೋಪಿಸಿದರು.

ಇದೇ ವೇಳೆ ರಾಜ್ಯದ ಸಂಸದರ ಮತ್ತು ಶಾಸಕರ ಭಾವಚಿತ್ರಗಳನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜನಪ್ರತಿನಿಧಿಗಳ ಪ್ರತಿಕೃತಿ ದಹನ ಮಾಡಿ ಎಂಇ‌ಎಸ್ ಸಂಘಟನೆ ಬ್ಯಾನ್ ಮಾಡಲು ಸರ್ಕಾರಕ್ಕೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.