ETV Bharat / city

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ : ಸಾಮಾಜಿಕ ಅಂತರ ಮರೆತ ಪ್ರತಿಭಟನಾಕಾರರು

ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ, ಅನಿವಾರ್ಯವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದಷ್ಟು ಬೇಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು..

Protest
ಪ್ರತಿಭಟನೆ
author img

By

Published : Jul 3, 2021, 7:38 PM IST

ಬೆಳಗಾವಿ : ಖಾನಾಪುರ-ರಾಮನಗರ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಹೆದ್ದಾರಿ ದುರಸ್ತಿ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಖಾನಾಪುರ ತಾಲೂಕಿನ ಗೋವಾ ಕ್ರಾಸ್​ನಿಂದ ರುಮೇವಾಡಿ ಕ್ರಾಸ್​ವರೆಗೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ನಡೆಸಿದ ಶಾಸಕಿ ಅಂಜಲಿ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರಿಂದ ಸಾರ್ವಜನಿಕರು ರಸ್ತೆ ದಾಟಲು ಹರ ಸಾಹಸಪಟ್ಟರು. ಈ ವೇಳೆ ಸ್ವತಃ ಪ್ರತಿಭಟನಾಕಾರರೇ ಎದ್ದು ಹೋಗಿ ಕೈಮುಗಿದು ಪ್ರತಿಭಟನೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಳಿಕ ಮಾತನಾಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ಖಾನಾಪುರ ಮೂಲಕ ಹಾದು ಹೋಗುವ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ. ಇದರಿಂದ ಖಾನಾಪುರ ತಾಲೂಕಿನ 40 ಹಳ್ಳಿಗಳಿಗೆ ಸಂಚಾರ ಮಾಡುವ ವಾಹನ ಸವಾರರು ಸಮಸ್ಯೆ ಅನುಭವಿಸುತ್ತಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ, ಅನಿವಾರ್ಯವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದಷ್ಟು ಬೇಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೋವಿಡ್ ನಿಯಮ ಉಲ್ಲಂಘನೆ : ಪ್ರತಿಭಟನೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದು, ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಪಾಲನೆ ಮಾಡದೆ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪಮಟ್ಟಿಗೆ ಇಳಿಕೆ ಆಗಿದ್ದರೂ, ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ, ಜಿಲ್ಲೆಯ ಜನರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.