ETV Bharat / city

ಬಸವ ತತ್ವ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆಗೆ ರಕ್ಷಣೆ ನೀಡಲು ಆಗ್ರಹಿಸಿ ಪ್ರತಿಭಟನೆ - Belgaum News

ಬಸವ ತತ್ವ ಚಿಂತಕರಾಗಿರುವ ವಿಶ್ವಾರಾಧ್ಯ ಸತ್ಯಂಪೇಟೆ ಅವರ ಮೇಲೆ ಕೆಲವರು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ..

Protest for demanding protection of Basava philosopher vishwaradya sathayampete
ಬಸವ ತತ್ವ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Jul 31, 2020, 5:07 PM IST

ಬೆಳಗಾವಿ : ಜೀವ ಬೆದರಿಕೆ ಮತ್ತು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಬಸವ ತತ್ವ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ಸೇನೆ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಮುಖಂಡರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಸವ ತತ್ವ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಬಸವ ತತ್ವ ಚಿಂತಕರಾಗಿರುವ ವಿಶ್ವಾರಾಧ್ಯ ಸತ್ಯಂಪೇಟೆ ಅವರ ಮೇಲೆ ಕೆಲವರು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆಯನ್ನು ಹಾಕಲಾಗುತ್ತಿದೆ‌.

ಹೀಗಾಗಿ ರಾಜ್ಯ ಸರ್ಕಾರ ವಿಶ್ವಾರಾಧ್ಯ ಸತ್ಯಂಪೇಟೆ ಅವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.