ಚಿಕ್ಕೋಡಿ: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಗೋರಕ್ಷಕ ಶಿವು ಉಪ್ಪಾರ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಶ್ರೀರಾಮಸೇನೆ ಆಗ್ರಹಿಸಿದೆ.
ಮೂಡಲಗಿ ಪಟ್ಟಣದ ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಮೂಡಲಗಿಯ ತಹಶಿಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತ ಸುಧೀರ್ ಮಾತನಾಡಿ, ಹಿಂದೂ ಕಾರ್ಯಕರ್ತರ ಹತ್ಯೆ ಕೇವಲ ಕರಾವಳಿ ಭಾಗದಲ್ಲಿ ಮಾತ್ರ ನಡೆಯತಿತ್ತು. ಈಗ ಉತ್ತರ ಕರ್ನಾಟಕ ಭಾಗಕ್ಕೂ ಕಾಲಿಟ್ಟಿರುವುದು ಆತಂಕಕಾರಿ ಬೆಳವಣಿಗೆ. ಶಿವು ಉಪ್ಪಾರ್ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಇಂತಹ ಹಲವು ಘಟನೆಗಳು ನಡೆದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.