ಬೆಳಗಾವಿ: 24 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಸವದತ್ತಿ ತಾಲೂಕಿನ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುತ್ತಪ್ಪ ನಾಯ್ಕರ್ (30) ಬಂಧಿತ ಆರೋಪಿ.
ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ್ದ ಆರೋಪಿ, ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಸಂತ್ರಸ್ತೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.