ಬೆಳಗಾವಿ: ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಅತೀ ಸರಳ ರೀತಿಯಲ್ಲಿ ಆಚರಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರಿಂದ ಡಿಸಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಶಾಸಕರು, ಅನೇಕ ವರ್ಷಗಳಿಂದ ದಸರಾ ಹಬ್ಬವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದ್ದರಿಂದ ಕೊರೊನಾ ಮಹಾಮಾರಿಯಿಂದ ಈ ವರ್ಷ ಅತೀ ಸರಳ ರೀತಿಯಿಂದ ಆಚರೆಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ಸರ್ಕಾರದ ಕೋವಿಡ್ (19) ನಿಯಮಗಳನ್ನು ಪಾಲನೆ ಮಾಡಲಾಗುವುದು. ಹೀಗಾಗಿ ಬೆಳಗಾವಿ ದಸರಾ ಹಬ್ಬವನ್ನು ಆಚರಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.