ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಸ್ತೆ ಅಪಘಾತವಾಗಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರಂತ ನಡೆದಿದೆ.
ಚಿಕ್ಕೋಡಿ ಪಟ್ಟಣದ ನಿವಾಸಿಗಳಾದ ಪಂಚಾಕ್ಷರಿ ಕುಡಚಿಮಠ (56), ರಕ್ಷಿತ್ ಕುಡಚಿಮಠ (20) ಮೃತ ತಂದೆ ಮಗ. ಇವರು ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.