ETV Bharat / city

ಚುನಾವಣೆಯಲ್ಲಿ ಸೋತರೂ ಜನರ ಮನಸ್ಸಿನಲ್ಲಿದ್ದೇನೆ: ಸತೀಶ್​ ಜಾರಕಿಹೊಳಿ

ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಯಾವಾಗ ಬೇಕಾದರೂ ನಮ್ಮನ್ನು ಸಂಪರ್ಕಿಸಿ ನೆರವು ಪಡೆಯಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಭರವಸೆ ನೀಡಿದರು.

Satish Jarkiholi
ಸತೀಶ್​ ಜಾರಕಿಹೊಳಿ
author img

By

Published : Jul 21, 2021, 8:26 AM IST

ಬೆಳಗಾವಿ: ಲೋಕಸಭಾ ಉಪಚುನಾವಣೆಯಲ್ಲಿ ಸೋತರೂ ಜನರ ಮನಸ್ಸಿನಲ್ಲಿದ್ದೇನೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗೆ ಸ್ಪಂದಿಸುವುದೇ ನನ್ನ ಗುರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದರು.

ಮತಕ್ಷೇತ್ರದ ಸತ್ತಿಗೇರಿ, ಸೊಪಡ್ಲಾ, ಯರಗಟ್ಟಿ ಹಾಗೂ ಇಟ್ನಾಳ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದು ಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮದ ಜನರನ್ನು ಖುದ್ದಾಗಿ ಭೇಟಿಯಾಗಿ ಧನ್ಯವಾದ ಸಲ್ಲಿಸಲು ಬಂದಿದ್ದೇನೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಯಾವಾಗ ಬೇಕಾದರೂ ನಮ್ಮನ್ನು ಸಂಪರ್ಕಿಸಿ ನೆರವು ಪಡೆಯಬಹುದು ಎಂದು ಭರವಸೆ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಕೊರೊನಾ ನಿರ್ವಹಣೆಯಲ್ಲೂ ಸರ್ಕಾರಗಳು ವಿಫಲವಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಆದರೂ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸಲು ತಯಾರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.