ETV Bharat / city

ಕುಂದಾನಗರಿಗಿಂದು ಸಿದ್ದರಾಮಯ್ಯ, ಡಿಕೆಶಿ: ರಮೇಶ್ ಜಾರಕಿಹೊಳಿ‌ಗೆ ಠಕ್ಕರ್ ಕೊಡ್ತಾರಾ ಕೈ ನಾಯಕರು?

ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಪಕ್ಷಗಳ ನಾಯಕರು ಭರ್ಜರಿ ಮತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಬೆಳಗಾವಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

author img

By

Published : Dec 5, 2021, 10:00 AM IST

siddaramaiah-and-dk-shivakumar-visits-belagavi-for-council-election-campaign
ಕುಂದಾನಗರಿಗಿಂದು ಸಿದ್ದರಾಮಯ್ಯ, ಡಿಕೆಶಿ: ರಮೇಶ್ ಜಾರಕಿಹೊಳಿ‌ಗೆ ಠಕ್ಕರ್ ಕೊಡ್ತಾರಾ ಕೈ ನಾಯಕರು?

ಬೆಳಗಾವಿ: ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಆಗಮಿಸಲಿದ್ದು, ಕಾಂಗ್ರೆಸ್ ‌ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಜಂಟಿ ಪ್ರಚಾರ ನಡೆಸಲಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಮದುರ್ಗ ತಾಲೂಕಿನ ಕಲ್ಲೂರು ಗ್ರಾಮ, ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಯಬಾಗದಲ್ಲಿ ಪ್ರಚಾರ ‌ಸಭೆ ನಡೆಸಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ರಾಮದುರ್ಗ ತಾಲೂಕಿನ ಕಲ್ಲೂರು ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಕಲ್ಲೂರು ಗ್ರಾಮದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಉಭಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಳಿಕ ರಾಮದುರ್ಗದಿಂದ ಹೆಲಿಕಾಪ್ಟರ್ ಮೂಲಕ ರಾಯಬಾಗಕ್ಕೆ ಪ್ರಯಾಣ ಬೆಳೆಸಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ರಾಯಬಾಗದಿಂದ ರಸ್ತೆ ಮಾರ್ಗವಾಗಿ ಸಿದ್ದರಾಮಯ್ಯ ಬಾದಾಮಿಗೆ ತೆರಳಲಿದ್ದಾರೆ.

ಮತ್ತೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬೆಳಗಾವಿಗೆ ಆಗಮಿಸಲಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಡಿಕೆಶಿ ರಾತ್ರಿ ವೇಳೆ ಜಿಲ್ಲಾ ಪ್ರಮುಖ ನಾಯಕರ ಜೊತೆ ಚುನಾವಣಾ ಪ್ರಚಾರ, ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ಡಿಕೆಶಿಯ ಪ್ರತಿ ಶಬ್ದಕ್ಕೆ ಡಿಸೆಂಬರ್ 14ರಂದು ಉತ್ತರ ಕೊಡುತ್ತೇನೆ ಎಂದಿದ್ದ ಹಾಗೂ ವಿವೇಕರಾವ್ ಪಾಟೀಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದಕ್ಕೆ ಸಿದ್ದರಾಮಯ್ಯ ಕುರುಬ ವಿರೋಧಿ ಎಂದು ರಮೇಶ್ ಜಾರಕಿಹೊಳಿ ಈಗಾಗಲೇ ಆರೋಪಿಸಿದ್ದು, ಜಾರಕಿಹೊಳಿ ಆರೋಪಕ್ಕೆ ಸಿದ್ದರಾಮಯ್ಯ, ಡಿಕೆಶಿ ಕೌಂಟರ್ ಕೊಡ್ತಾರಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 40 ಮಂದಿಗೆ ಕೋವಿಡ್‌

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.