ETV Bharat / city

ಸಿದ್ದರಾಮಯ್ಯ 'ಸುವರ್ಣ' ಪಾದಯಾತ್ರೆಗೆ ಪೊಲೀಸರಿಂದ ತಡೆ : ಖಾಕಿ ವಿರುದ್ಧ ಮಾಜಿ ಸಿಎಂ ಗರಂ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಾದಯಾತ್ರೆ ಸುವರ್ಣಸೌಧ ತಲುಪುವ ಮುನ್ನವೇ ಪೊಲೀಸರು ಅರ್ಧಕ್ಕೆ ತಡೆದರು. ಸುವರ್ಣಸೌಧ ಸುತ್ತ ನಿಷೇಧಾಜ್ಞೆ ಜಾರಿ ಇರುವುದರಿಂದ ಯಾತ್ರೆಗೆ ಪೊಲೀಸರು ಅವಕಾಶ ನಿರಾಕರಿಸಿದರು. ಪೊಲೀಸರ ವರ್ತನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

siddaramaiah-suvarnasouda-padayatra
ಸಿದ್ದರಾಮಯ್ಯ
author img

By

Published : Dec 13, 2021, 11:25 AM IST

ಬೆಳಗಾವಿ : ಅಧಿವೇಶನ ಹಿನ್ನೆಲೆ ಸುವರ್ಣಸೌಧ ಪಾದಯಾತ್ರೆ ಹಮ್ಮಿಕೊಂಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಪೊಲೀಸರು ಅರ್ಧಕ್ಕೆ ತಡೆದ ಹಿನ್ನೆಲೆ ಪೊಲೀಸರ ವಿರುದ್ಧ ಅವರು ನಾಯಕ ಗರಂ ಆದ ಪ್ರಸಂಗ ನಗರದಲ್ಲಿ ನಡೆಯಿತು.

ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಾದಯಾತ್ರೆ ಸುವರ್ಣಸೌಧ ತಲುಪುವ ಮುನ್ನವೇ ಪೊಲೀಸರು ಅರ್ಧಕ್ಕೆ ತಡೆದರು. ಸುವರ್ಣಸೌಧ ಸುತ್ತ ನಿಷೇಧಾಜ್ಞೆ ಜಾರಿ ಇರುವುದರಿಂದ ಯಾತ್ರೆಗೆ ಪೊಲೀಸರು ಅವಕಾಶ ನಿರಾಕರಿಸಿದರು.

ಪೊಲೀಸರ ವರ್ತನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಯತೀಂದ್ರ ಅವರನ್ನು ತಡೆಯಲು ಮುಂದಾದ ಪೊಲೀಸರ ವಿರುದ್ಧ ಮಾಜಿ ಸಿಎಂ ಸಿಟ್ಟಿಗೆದ್ದು, ಮ್ಯಾನ್​ ಹ್ಯಾಂಡ್ಲಿಂಗ್​ ಮಾಡ್ತಿದ್ದೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ನಿನ್ನ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಬ್ಯಾರಿಕೇಡ್ ತಲ್ಲಿ ಸೌಧಕ್ಕೆ ನುಗ್ಗಲು ಯತ್ನಿಸಿದರೂ ಸಾಧ್ಯವಾಗದ ಹಿನ್ನೆಲೆ, ರಸ್ತೆ ಮಧ್ಯೆಯೇ ಜನರನ್ನು ಉದ್ದೇಶಿಸಿ ಸಮಾವೇಶ ನಡೆಸಿ ಸಿದ್ದರಾಮಯ್ಯ ಮಾತನಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.