ಬೆಳಗಾವಿ : ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕದ ಹಲವು ಪ್ರದೇಶಗಳಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತ್ವರಿತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಜಿಲ್ಲೆಯ ಗೋಕಾಕ್ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಜೊತೆಗೆ ರಾಮದುರ್ಗ ತಾಲೂಕಿನ ಕೆಲವು ಗ್ರಾಮಗಳಿಗೆ ಇಂದು ಸಿದ್ದರಾಮಯ್ಯ ಭೇಟಿ ನೀಡಿದರು. ಗ್ರಾಮಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ ಸಿದ್ದರಾಮಯ್ಯ, ಹಲವು ಕುಟುಂಬಗಳು ಮನೆ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದು, ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ತಕ್ಷಣ ಹತ್ತು ಸಾವಿರ ಪರಿಹಾರ ನೀಡಬೇಕು ಜೊತೆಗೆ ಬಿದ್ದ ಮನೆಗಳಿಗೆ ಹತ್ತು ಲಕ್ಷ ರೂ. ಪರಿಹಾರವನ್ನು ಸರ್ಕಾರ ಕೊಡಬೇಕು ಎಂದು ಒತ್ತಾಯಿಸಿದರು.
ಇನ್ನು ಈ ವೇಳೆ ಮನೆ ಕಳೆದುಕೊಂಡ ಅನೇಕ ಸಂತ್ರಸ್ತರು ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಮಾಜಿ ಸಿಎಂಗೆ ಮನವಿ ಮಾಡಿಕೊಂಡರು.