ಬೆಳಗಾವಿ: ಕಬ್ಬು ಕಟಾವು ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಕೊಟ್ಯಂತರ ರೂಪಾಯಿ ಮೌಲ್ಯದ ವಾಹನ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ.
ರಾಜು ಸೌದತ್ತಿ ಎಂಬುವರಿಗೆ ಸೇರಿದ ವಾಹನದಿಂದ ಕಬ್ಬುಗಳ ಕಟಾವು ಮಾಡಲಾಗುತ್ತಿದ್ದು ಕೃಷ್ಣಾ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಲಾಗುತ್ತಿತ್ತು.
ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.