ಬೆಳಗಾವಿ: ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆಯ ಸಮಿತಿ ವಜಾಗೊಳಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಇಲ್ಲಿನ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ಬರಗೂರ ರಾಮಚಂದ್ರಪ್ಪ ಅಧ್ಯಕ್ಷತೆಯ ಪರಿಷ್ಕರಣೆ ಪಠ್ಯ ಮುಂದುವರೆಸುವಂತೆ ಒತ್ತಾಯಿಸಿದ ಹೋರಾಟಗಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರೋಹಿತ ಚಕ್ರವರ್ತಿ ಅಧ್ಯಕ್ಷತೆ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮುಂದುವರೆಸಿದರೆ ಗೋಕಾಕ್ ಮಾದರಿಯ ಚಳವಳಿ ಮಾಡುವುದಾಗಿ ಎಚ್ಚರಿಕೆ ನೀಡಿದರು. ಸಾಹಿತಿ ವೈ.ಬಿ. ಹಿಮ್ಮಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ ; ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದಂಪತಿ ಕೊನೆಗೂ ಲಾಕ್!