ETV Bharat / city

ವಿದ್ಯಾರ್ಥಿ ನವೀನ್ ಸಾವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಲಕ್ಷ್ಮಣ್ ಸವದಿ - ಸಾಧ್ಯವಾದಷ್ಟು ಬೇಗ ಎಲ್ಲಾ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಕರೆತರುತ್ತದೆ.

ಉಕ್ರೇನ್ ದೇಶದಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಅಧಿಕಾರಿಗಳ ತಂಡ ಹಾಗೂ ಕೇಂದ್ರದ ಸಚಿವರನ್ನು ನೇಮಿಸಲಾಗಿದೆ. ಆದಷ್ಟು ಬೇಗನೆ ಭಾರತ ದೇಶದ ವಿದ್ಯಾರ್ಥಿಗಳ ರಕ್ಷಣೆ ಮಾಡಲಾಗುತ್ತದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

The central government is making every effort to bring back those trapped in Ukraine
ಲಕ್ಷ್ಮಣ್ ಸವದಿ
author img

By

Published : Mar 2, 2022, 4:47 PM IST

Updated : Mar 2, 2022, 7:52 PM IST

ಬೆಳಗಾವಿ: ಉಕ್ರೇನ್ ಹಾಗೂ ರಷ್ಯಾ ದೇಶ ನಡುವೆ ಯುದ್ಧ ನಡೆಯುತ್ತಿದ್ದು, ಖಾರ್ಕೀವ ನಗರದಲ್ಲಿ ಸಿಲುಕಿದ ರಾಜ್ಯದ ವಿದ್ಯಾರ್ಥಿ ನವೀನ್ ಸಾವು ಸಂಭವಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ವಿದ್ಯಾರ್ಥಿ ನವೀನ್ ಸಾವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಲಕ್ಷ್ಮಣ್ ಸವದಿ

ಅವರು ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಕಾಲುವೆ ವಿಸ್ತರಣೆ 1.45 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸದ್ಯ ಉಕ್ರೇನ್ ದೇಶದಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಉಕ್ರೇನ್ ದೇಶದಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಅಧಿಕಾರಿಗಳ ತಂಡ ಹಾಗೂ ಕೇಂದ್ರದ ನಾಲ್ವರು ಸಚಿವರನ್ನು ನೇಮಿಸಲಾಗಿದೆ. ಆದಷ್ಟು ಬೇಗನೆ ಭಾರತ ದೇಶದ ವಿದ್ಯಾರ್ಥಿಗಳ ರಕ್ಷಣೆ ಮಾಡಲಾಗುತ್ತದೆ ಎಂದು ಸವದಿ ಭರವಸೆ ನೀಡಿದರು.

ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಪಾದಯಾತ್ರೆ: ಸದ್ಯ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬದುಕಿದೆ ಎಂಬುದನ್ನು ತೋರಿಸಲು ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕೈ ನಾಯಕರಿಗೆ ಟಾಂಗ್ ನೀಡಿದರು.

ಬಿಜೆಪಿ ಸರ್ಕಾರ ಇದ್ದಾಗ ಮೇಕೆದಾಟು ಯೋಜನೆ ರೂಪಿಸಲಾಗಿದೆ. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅಧಿಕಾರದಲ್ಲಿ ಇರುವಾಗಲೇ ಯಾವುದೇ ಕಾರ್ಯ ಮಾಡದ ನಾಯಕರು, ಈಗ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇರುವಿಕೆಯನ್ನು ತೋರಿಸಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಲಕ್ಷ್ಮಣ್ ಸವದಿ ವ್ಯಂಗ್ಯವಾಡಿದರು.

ಇದನ್ನೂ ಓದಿ: ಉಕ್ರೇನ್‌ ಮೇಲೆ ಮುಗಿಬಿದ್ದ ರಷ್ಯಾಗೆ ಯಾವ್ಯಾವ ಕ್ರೀಡೆಗಳಿಂದ ಏನು ನಿರ್ಬಂಧ..?

Last Updated : Mar 2, 2022, 7:52 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.