ಬೆಳಗಾವಿ: ಕೊರೊನಾ ಸೋಂಕು ಹರಡುವ ಭೀತಿ ಇದ್ದರೂ ಸಹ ಬೆಳಗಾವಿ ಎಪಿಎಂಸಿ ಆವರಣದ ತರಕಾರಿ ಮಾರುಕಟ್ಟೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಆತಂಕಕ್ಕೆ ಎಡೆ ಮಾಡಿ ಕೊಟ್ಟಿದ್ದಾರೆ.
ಇಲ್ಲಿನ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಲು ಚಿಲ್ಲರೆ ವ್ಯಾಪಾರಸ್ಥರು, ಗ್ರಾಹಕರು ಕಿಕ್ಕಿರಿದು ಸೇರಿದ್ದಾರೆ. ಚಿಲ್ಲರೆ ವ್ಯಾಪಾರಸ್ಥರಷ್ಟೇ ಅಲ್ಲದೇ ತರಕಾರಿ ಖರೀದಿಗೆ ಸಾರ್ವಜನಿಕರು ಮುಗಿಬಿದ್ದಿದ್ದು, ಜನಸಂದಣಿ ತಡೆಯಲು ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎನ್ನಲಾಗಿದೆ.
ಏಷ್ಟೇ ಜಾಗೃತಿ ಮೂಡಿಸಿದರೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟು ನಡೆದಿದೆ. ಜೊತೆಗೆ ಬಹುತೇಕ ಜನರು ಮಾಸ್ಕ್ ಧರಿಸದೆ ಅಸಡ್ಡೆತನ ತೋರುತ್ತಿದ್ದಾರೆ. ಜಿಲ್ಲೆಯಾದ್ಯಂತ ತರಕಾರಿ ತಂದಿರುವ ವಾಹನಗಳು ಸಾಲುಗಟ್ಟಿ ನಿಂತಿವೆ.