ಬೆಳಗಾವಿ : ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೂ ಕೂಡ ಬೆಳಗಾವಿ ಜಿಲ್ಲಾಡಳಿತ ಹಾಗೂ ಜನತೆ ಎಚ್ಚರಿಕೆ ವಹಿಸುತ್ತಿಲ್ಲ. ಪರಿಣಾಮ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.
ನಗರದ ಎಪಿಎಂಸಿ ಮಾರ್ಕೇಟ್, ಗಾಂಧಿನಗರದ ಹೂವಿನ ಮಾರುಕಟ್ಟೆ, ಗಣಪತಿ ಗಲ್ಲಿ, ಭಾನುವಾರ ಪೇಟೆ ಸೇರಿ ನಗರದ ಬಹುತೇಕ ಮಾರುಕಟ್ಟೆ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಮಾಯವಾಗಿದೆ.
ಓದಿ: ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಪುಂಡ : ಬೆಳಗಾವಿಯಲ್ಲಿ ನಾಡದ್ರೋಹಿಯ ಉದ್ಧಟತನ
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ, ಗಡಿ ಪ್ರದೇಶ ಸೇರಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ರಾಜ್ಯಸರ್ಕಾರ ಸೂಚಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆದರೆ, ಬೆಳಗಾವಿ ಜಿಲ್ಲಾಡಳಿತ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ವಹಿಸಿದೆ.