ಚಿಕ್ಕೋಡಿ : ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಇಳಿಮುಖವಾಗಿದ್ದರಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಜಲಾವೃತವಾಗಿದ್ದ ಚಿಕ್ಕೋಡಿ ತಾಲೂಕಿನ ಎರಡು ಸೇತುವೆ ಹಾಗೂ ನಿಪ್ಪಾಣಿ ತಾಲೂಕಿನ ಒಂದು ಸೇತುವೆ ಸಂಚಾರಕ್ಕೆ ಮುಕ್ತವಾಗಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ - ಬೊರಗಾಂವ, ಯಕ್ಸಂಬಾ - ದಾನವಾಡ ಮತ್ತು ನಿಪ್ಪಾಣಿ ತಾಲೂಕಿನ ಸಿದ್ನಾಳ - ಅಕ್ಕೋಳ ಸೇತುವೆಗಳು ಸಂಚಾರಕ್ಕೆ ಪುನರಾರಂಭವಾಗಿವೆ. ಇನ್ನು ತಾಲೂಕಿನ ಕಲ್ಲೋಳ - ಯಡೂರ ಸೇತುವೆ ಶುಕ್ರವಾರ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಸಂತೋಷ ಬಿರಾದರ ಮಾಹಿತಿ ನೀಡಿದ್ದಾರೆ.