ಬೆಳಗಾವಿ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಇಂದಿನಿಂದ ಎರಡು ದಿನ ಜಿಲ್ಲಾಡಳಿತ ಸಂಪೂರ್ಣ ಲಾಕ್ಡೌನ್ ಘೋಷಿಸಿದೆ. ಹೀಗಾಗಿ, ಕುಂದಾನಗರಿ ಸಂಪೂರ್ಣ ಸ್ತಬ್ಧಗೊಂಡಿದೆ.
ಹಾಲು ಪೂರೈಕೆ ಹಾಗೂ ಮಾರಾಟ, ಔಷಧಿ ಖರೀದಿ, ವೈದ್ಯಕೀಯ ಸೇವೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನುಳಿದಂತೆ ದಿನಸಿ, ತರಕಾರಿ ಹಾಗೂ ಎಟಿಎಂ ಸೇವೆ ಎರಡು ದಿನ ಸಂಪೂರ್ಣ ಬಂದ್ ಆಗಿರಲಿದೆ. ವೀಕೆಂಡ್ ಲಾಕ್ಡೌನ್ಗೆ ಕುಂದಾನಗರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ಅಗತ್ಯ ಸೇವೆಗಳನ್ನು ಪೂರೈಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ಓಡಾಡುವ ವಾಹನಗಳ ಮೇಲೆ ಎಫ್ಐಆರ್ ದಾಖಲಿಸಿ, ಸೀಜ್ ಮಾಡಲಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಿಯೋಜನೆಗೊಂಡಿದ್ದು, ಕುಂಟು ನೆಪ ಹೇಳಿ ಓಡಾಡುವವರನ್ನು ಮನೆಗೆ ಕಳಿಸಲಾಗುತ್ತಿದೆ.
ಇದನ್ನೂ ಓದಿ: ಹಣ ನೀಡದಿದ್ದಕ್ಕೆ ಪಾರ್ಶ್ವವಾಯು ಪೀಡಿತ ತಂದೆಯನ್ನ ಕೊಡಲಿಯಿಂದ ಹೊಡೆದು ಕೊಂದ ಮಗ!