ಬೆಳಗಾವಿ: ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಳಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮುಗುಟಸಾಬ್ ನದಾಪ್(25), ಸಂಗೊಳ್ಳಿ ಗ್ರಾಮದ ಪ್ರಸಾದ್ ವಕ್ಕುಂಡಮಠ(18) ಮೃತ ದುರ್ದೈವಿಗಳು. ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಇದನ್ನೂ ಓದಿ: 'ಭಾರತದ ಧ್ವಜ ನಮ್ಮ ಪ್ರಾಣ ಉಳಿಸಿತು'.. ಉಕ್ರೇನ್ನಿಂದ ವಾಪಸ್ ಬಂದ ವಿದ್ಯಾರ್ಥಿನಿ ಶಿವಾಂಗಿ ಮನದಾಳ)