ಚಿಕ್ಕೋಡಿ : ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಕರೆ ತರುವಲ್ಲಿ ಕೇಂದ್ರ ಸರಕಾರ ವಿಶೇಷ ಕಾರ್ಯಾಚರಣೆ ನಿರ್ವಹಿಸುತ್ತಿದೆ ಎಂದು ಸಂಸದ ಅಣ್ಣಾಸಾಬ ಜೊಲ್ಲೆ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುದ್ಧ ಭೀತಿಯಿಂದ ಸಂಪರ್ಕ ಸಾಧಿಸಲು ಸಾಧ್ಯವಿರದಿದ್ದರೂ ಎಲ್ಲರನ್ನೂ ಕರೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಜೊತೆಯಲ್ಲಿರುತ್ತದೆ. ಎಲ್ಲರನ್ನು ವಾಪಸ್ ಕರೆ ತರುವ ವ್ಯವಸ್ಥೆ ಮಾಡಲಾಗಿದೆ.
ಇನ್ನು ಕೆಲವೇ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ತರುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸದ್ಯ ಸಾಧ್ಯವಾದಷ್ಟೂ ಅಲ್ಲಿಯ ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.
ಉಕ್ರೇನ್‌ನಲ್ಲಿ ಏರ್‌ಪೋರ್ಟ್ ಬಂದಾಗಿರುವುದರಿಂದ,ಉಕ್ರೇನ್‌ನ ಸುತ್ತಮುತ್ತ ರಾಷ್ಟ್ರಗಳಲ್ಲಿ ಭಾರತದ ಫ್ಲೈಟ್ ಇಟ್ಟು ಎಲ್ಲರನ್ನ ಕರೆ ತರುವ ವ್ಯವಸ್ಥೆ ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆ ಎಂದು ಚಿಕ್ಕೋಡಿಯಲ್ಲಿ ಸಂಸದ ಅಣ್ಣಾಸಾಬ ಜೊಲ್ಲೆ ಹೇಳಿದ್ದಾರೆ.
ಪೋಷಕರು ಆತಂಕಕ್ಕೆ ಒಳಗಾಗದಿರಿ : ಸಚಿವೆ ಜೊಲ್ಲೆ
ಕರುನಾಡಿನ ಮಕ್ಕಳನ್ನು ಕರೆದುಕೊಂಡು ಬರುವ ಕಾರ್ಯವನ್ನು ಮಾಡಲಾಗುತ್ತಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್- ರಷ್ಯಾ ದೇಶದ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಕರುನಾಡಿನ ಮಕ್ಕಳನ್ನು ಕರೆದುಕೊಂಡು ಬರುವ ಕಾರ್ಯವನ್ನು ಮಾಡುತ್ತಿದೆ.
ಆ ನಿಟ್ಟಿನಲ್ಲಿ ದೇಶದ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸತತ ಪ್ರಯತ್ನ ಮಾಡುತ್ತಿದ್ದಾರೆ. ಆದಷ್ಟು ಬೇಗನೆ ನಮ್ಮ ಮಕ್ಕಳನ್ನು ಕರೆತರುವ ಪ್ರಯತ್ನ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದ ಮಕ್ಕಳನ್ನು ಭಾರತ ರಾಯಭಾರಿ ಕಚೇರಿಯಿಂದ ಸಂಪರ್ಕ ಮಾಡುತ್ತಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ನೂರಾರು ಮಕ್ಕಳು ಸುರಕ್ಷಿತವಾಗಿ ದೇಶಕ್ಕೆ ಮರಳಿದ್ದಾರೆ.
ಆದಷ್ಟು ಬೇಗನೆ ದೇಶಕ್ಕೆ ಎಲ್ಲ ಮಕ್ಕಳನ್ನು ಕರೆತರುತ್ತೇವೆ. ಪೋಷಕರು ಯಾವುದೇ ಆತಂಕ ಪಡಬಾರದು. ನಿಮ್ಮ ಜೊತೆ ಸರ್ಕಾರ ನಾವು ಇದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಓದಿ :ಚಿಕ್ಕಬಳ್ಳಾಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ಮನೆ ಛಿದ್ರ ಛಿದ್ರ-ಗಂಭೀರವಾಗಿ ಗಾಯಗೊಂಡ ದಂಪತಿ!