ETV Bharat / city

ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಅಪರಿಚಿತ ವ್ಯಕ್ತಿ ಶವ ಪತ್ತೆ ನ್ಯೂಸ್​

ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Unknown person dead body found in chikkodi
ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
author img

By

Published : Jan 27, 2020, 12:53 PM IST

ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ನಡೆದಿದೆ.

ಉಗಾರ ಬುದ್ರುಕ ಗ್ರಾಮದ ಪದ್ಮಾವತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶೀತಲಗೌಡ ಪಾಟೀಲ್​ ಅವರ ಕಬ್ಬಿನ ಗದ್ದೆಯಲ್ಲಿ ಅಪರಿಚಿತನ ಶವ ಪತ್ತೆಯಾಗಿದ್ದು, ಕೆಲಸಕ್ಕೆ ಹೋದ ಕೂಲಿ ಆಳುಗಳಿಗೆ ಕಬ್ಬಿನ ಗದ್ದೆಯಲ್ಲಿ ಈ ಶವ ಕಂಡಿದೆ. ಈ ಬಗ್ಗೆ ಸ್ಥಳೀಯರು ಹಾಗೂ ಶೀತಲಗೌಡ ಪಾಟೀಲ್​ ಹೋಗಿ ಪರಿಶೀಲಿಸಿ ಕೂಡಲೇ ಕಾಗವಾಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್​ ಸಿಬ್ಬಂದಿ ಬಂದು ತನಿಖೆ ನಡೆಸಿದ್ದಾರೆ.

ಅಥಣಿ ಸಿಪಿಐ ಶಂಕರಗೌಡ ಪಾಟೀಲ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿ ನೀಲಿ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್​ ಧರಿಸಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಶವದ ಹತ್ತಿರ ಬೆಳೆಗಳಿಗೆ ಸಿಂಪಡಿಸುವ ಔಷಧಿ ಬಾಟಲ್ ಕಂಡು ಬಂದಿದೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಶವ ಪತ್ತೆBody:

ಚಿಕ್ಕೋಡಿ :

ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ನಡೆದಿದೆ.

ಉಗಾರ ಬುದ್ರುಕ ಗ್ರಾಮದ ಪದ್ಮಾವತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶೀತಲಗೌಡಾ ಪಾಟೀಲ ಇವರ ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿದ್ದು, ದಿನನಿತ್ಯದ ಕೆಲಸಕ್ಕೆ ಹೋದ ಕೂಲಿಗಾರರಿಗೆ ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯರು ಹಾಗೂ ಶೀತಲಗೌಡಾ ಪಾಟೀಲ ಇವರು ಹೋಗಿ ಪರಿಶೀಲನೆ ಮಾಡಿ, ಕೂಡಲೇ ಕಾಗವಾಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಬಳಿಕ ಸಿಬ್ಬಂದಿಗಳು ಬಂದು ತನಿಖೆ ಮಾಡಿದರು.

ಅಥಣಿ ಸಿಪಿಐ ಶಂಕರಗೌಡರ ಈರಣಗೌಡರ ಇವರು ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಸುಮಾರು 40 ವಯಸ್ಸಿನ ಯುವಕನ ಶವ ಇದೆ ಎಂದು ಅಂದಾಜಿಸಲಾಗಿದೆ. ಶವದ ಮೈ ಮೇಲೆ ನೀಲಿ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟು ಧರಿಸಿದ್ದು, ಕಳೆದ ನಾಲ್ಕಾರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಶವದ ಹತ್ತಿರ ಬೆಳೆಗಳಿಗೆ ಸಿಂಪರಿಸುವ ರೋಗದ ಔಷಧ ಬಾಟಲ್ ಕಂಡು ಬಂದಿದೆ. ಈ ಕುರಿತು ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.