ಬೆಳಗಾವಿ : ಹಿಂಡಲಗಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮರಾಠಿ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡಿ ಕಾನೂನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದು, ಅಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಹಿಂಡಲಗಾ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಹಿಂಡಲಗಾ ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮರಾಠಿಯಲ್ಲಿ ಪತ್ರ ವ್ಯವಹಾರ ನಡೆಸಲು ಹಲವಾರು ಒತ್ತಡ ಮತ್ತು ಸುತ್ತಮುತ್ತಲಿನವರ ಮನಸ್ಥಿತಿಗಳು ಕಾರಣವಾಗಿರಬಹುದು. ಆದ್ದರಿಂದ ಅವರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಗ್ರಾಮಸ್ಥ ಗಂಗಾಧರ ದೇಸಾರಿ ಮಾತನಾಡಿ, ಗ್ರಾಮದಲ್ಲಿ ಮರಾಠಿಗರು ಮತ್ತು ಕನ್ನಡಿಗರು ಸೌಹಾರ್ಧತೆಯಿಂದ ಜೀವನ ನಡೆಸುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ಣಯದಿಂದ ರಾಜಕೀಯ ಗಲಭೆಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಅಮಾನತು ಆದೇಶವನ್ನು ಹಿಂಪಡೆದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು.
ಅಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಹಿಂಡಲಗಾ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.