ETV Bharat / city

ಕೋವಿಡ್​ ಮಾರ್ಗಸೂಚಿ ಉಲ್ಲಂಘನೆ ಆರೋಪ: ಅಮಿತ್ ಶಾ, ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹ - Janasevac Conference

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ್​ ಸಮಾವೇಶ ಸಮಾರೋಪದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ, ಸಚಿವರು, ಲೋಕಸಭಾ ಸದಸ್ಯರು, ಬಿಜೆಪಿ ಪದಾಧಿಕಾರಿಗಳು ಮತ್ತು ಆಯೋಜಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದ್ದಾರೆ.

RTI activist Bhimappa Gadda
ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ
author img

By

Published : Jan 20, 2021, 3:36 PM IST

ಬೆಳಗಾವಿ: ಬಿಜೆಪಿ ಜನಸೇವಕ್​ ಸಮಾವೇಶ ಸಮಾರೋಪದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಮನವಿ ಸಲ್ಲಿಸಿದರು.

ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಪ್ರತಿಕ್ರಿಯೆ

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ್​ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ, ಸಚಿವರು, ಲೋಕಸಭಾ ಸದಸ್ಯರು, ಬಿಜೆಪಿ ಪದಾಧಿಕಾರಿಗಳು ಮತ್ತು ಆಯೋಜಕರ ವಿರುದ್ಧ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ವಿಪತ್ತು ನಿಯಂತ್ರಣ ಕಾಯ್ದೆಯಲ್ಲಿ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಮನವಿ ಸಲ್ಲಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ನಿಯಮಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿ. ಸಾರ್ವಜನಿಕರ ವಿರೋಧದ ನಡುವೆಯೂ ಬಿಜೆಪಿಯವರು ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಸಮಾವೇಶ ನಡೆಸಿ, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸಮಾವೇಶಕ್ಕೆ ಅನುಮತಿ ನೀಡುವಾಗ ಜಿಲ್ಲಾಡಳಿತ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. 100 ಕ್ಕಿಂತ ಹೆಚ್ಚಿನ ಜನರು ಒಂದು ಜಾಗದಲ್ಲಿ ಸೇರಬಾರದು ಎಂಬ ನಿಯಮವಿದ್ದರೂ ಒಂದೂವರೆ ಲಕ್ಷ ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. 65 ವರ್ಷ ಮೇಲಿನವರು ಕೂಡ ಬಹಳಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎನ್ನುವ ನಿಯಮವೂ ಪಾಲನೆಯಾಗಿಲ್ಲ. ಹೀಗಾಗಿ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.