ETV Bharat / city

ಕಳಪೆ ಬೋಧನೆ, ಮೂಲಸೌಕರ್ಯಗಳ ಕೊರತೆ : 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ ಜಡಿದ ವಿಟಿಯು

author img

By

Published : Aug 20, 2021, 5:28 PM IST

ವಿವಿಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ 6 ಕಾಲೇಜುಗಳನ್ನು ಮುಚ್ಚಲಿವೆ. ಈ ಆರು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗುವುದು ಎಂದು ವಿವಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ..

VTU Decided to close 6 engineering colleges of state
6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ ಜಡಿದ ವಿಟಿಯು

ಬೆಳಗಾವಿ : ಕಲಿಕೆಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಹಾಗೂ ಗುಣಮಟ್ಟದ ಬೋಧನೆಯಲ್ಲಿ ವಿಫಲವಾಗಿರುವ ರಾಜ್ಯದ 6 ಇಂಜಿನಿಯರಿಂಗ್‌ ಕಾಲೇಜುಗಳನ್ನು ಮುಚ್ಚಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧರಿಸಿದೆ.

public notice
ವಿವಿ ಪ್ರಕಟಣೆ

ಬೆಂಗಳೂರಿನ ಆಲ್ಫಾ ಇಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿಯ ಶೇಖ್ ಇಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಚಾಮರಾಜನಗರದ ಏಕಲವ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್‌ನ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನ ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜುಗಳನ್ನು ಮುಚ್ಚಿ ವಿವಿ ಆದೇಶ ಹೊರಡಿಸಿದೆ.

ಇದನ್ನು ಓದಿ: ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳ ರೌಡಿಸಂ: ತಂದೆಯೇ ಮಕ್ಕಳಿಗೆ ಸಾಥ್​

ವಿವಿಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ 6 ಕಾಲೇಜುಗಳನ್ನು ಮುಚ್ಚಲಿವೆ. ಈ ಆರು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗುವುದು ಎಂದು ವಿವಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಅಲ್ಲದೇ 2021-22ರ ಶೈಕ್ಷಣಿಕ ವರ್ಷದಿಂದ ರದ್ದಾಗಿರುವ ಈ ಕಾಲೇಜುಗಳಿಗೆ ಪ್ರವೇಶ ಪಡೆಯದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಎಚ್ಚರಿಕೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.