ETV Bharat / city

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿವೆ ಗಡಿಜಿಲ್ಲೆಗಳ ನದಿಗಳು, ಜನರಲ್ಲಿ ಆತಂಕ - ಕೃಷ್ಣಾ, ವೇದಗಂಗಾ, ದೂಧಗಂಗಾ, ಪಂಚಗಂಗಾ ನದಿಗಳು

ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ, ವೇದಗಂಗಾ, ದೂದ್‌ಗಂಗಾ ಹಾಗು ಪಂಚಗಂಗಾ ನದಿಗಳು ತುಂಬಿ ಹರಿಯುತ್ತಿವೆ.

Water flowing
ನೀರಿನ ಹರಿವು
author img

By

Published : Jun 20, 2020, 12:16 PM IST

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಹಾಗೂ ಕೊಲ್ಲಾಪೂರ ಜಿಲ್ಲೆಯ ವಿವಿಧ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಪರಿಣಾಮ ಕೃಷ್ಣಾ, ವೇದಗಂಗಾ, ದೂದ್‌ಗಂಗಾ ಹಾಗು ಪಂಚಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.

ಇದರಿಂದಾಗಿ ಚಿಕ್ಕೋಡಿ ಉಪವಿಭಾಗದ ವ್ಯಾಪ್ತಿಯ ಅಥಣಿ, ಕಾಗವಾಡ, ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿತೀರದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮಹಾರಾಷ್ಟ್ರದಿಂದ ವೇದಗಂಗಾ, ದೂದಗಂಗಾ ಹಾಗು ಕೃಷ್ಣಾ ನದಿಗೆ 60 ಸಾವಿರ ಕ್ಯೂಸೆಕ್​​ಗಿಂತ ಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಬೋಜ-ಹುನ್ನರಗಿ, ಕಾರದಗಾ-ಬೋಜ, ಸಿದ್ನಾಳ-ಅಕ್ಕೋಳ, ಭೋಜವಾಡಿ-ಕುನ್ನೂರ, ಮಲಿಕವಾಡ-ದತ್ತವಾಡ ಮತ್ತು ಕಲ್ಲೋಳ-ಯಡೂರ ಬ್ಯಾರೇಜ್​​​​ ಮುಳುಗಡೆಯಾಗಿ ಸಂಚಾರ ಸ್ಥಗಿತಗೊಂಡಿದೆ.

ನದಿಗಳಲ್ಲಿ ನೀರಿನ ಹರಿವು ಹೆಚ್ಚಳ

ಚಿಕ್ಕೋಡಿ ಉಪವಿಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಚಿಕ್ಕೋಡಿ ತಾಲೂಕಿನ ನದಿಗಳಿಗೆ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಬ್ಯಾರೇಜ್‌ಗೆ 56,000 ಕ್ಯೂಸೆಕ್​​ ನೀರು ಹರಿದು ಬರುತ್ತಿದ್ದು, ಬರುವ ನೀರಿನಷ್ಟೇ ಅವುಗಳನ್ನು ಹಿಪ್ಪರಗಿ ಬ್ಯಾರೇಜ್‌ನಿಂದ ಹೊರಗಡೆ ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.