ಚಿಕ್ಕೋಡಿ: ತಾಲೂಕಿನ ದೂಧಗಂಗಾ, ವೇದಗಂಗಾ ಮತ್ತು ಕೃಷ್ಣಾ ನದಿ ಪ್ರವಾಹ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಸಮನ್ವಯ ಸಮಿತಿ ರಚಿಸುವ ಬಗ್ಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಜೊತೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾನದಿಯ ಮೇಲಿರುವ ಹಳೇ ಬ್ರಿಡ್ಜ್ ಕಮ್ ಬಾಂದಾರ ಪರಿಶೀಲಿಸಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿದೆ. ರೈತರ ಅನುಕೂಲಕ್ಕಾಗಿ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಸಹಕಾರಿಯಾಗಲು ಪ್ರಯತ್ನಿಸಲಾಗುವುದು ಎಂದರು.