ಗೋಕಾಕ್: ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಅವರು ತಮ್ಮ ಪತ್ನಿ ಜೊತೆ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತದಾನ ಮಾಡಿದರು.
ನಂತರ ಮಾತನಾಡಿದ ಅವರು, ಈಗಾಗಲೇ ಮತದಾರರು ಯಾರಿಗೆ ಮತ ಚಲಾಯಿಸಬೇಕು ಎಂದು ತೀರ್ಮಾನ ಮಾಡಿರುತ್ತಾರೆ. ಮತದಾರರ ತೀರ್ಪನ್ನು ಎಲ್ಲರೂ ಸ್ವಾಗತಿಸೋಣ. ನನ್ನ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಎಲ್ಲ ನಮ್ಮ ನಾಯಕರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅದರ ಜೊತೆಗೆ ನನ್ನನ್ನು ಮಾನಸಿಕವಾಗಿ ಬೆಂಬಲಿಸಿದ ಮತದಾರರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಎಲೆಕ್ಷನ್‌ನಲ್ಲಿ ಸೋಲು ಗೆಲುವು ಸಾಮಾನ್ಯ. ಮತದಾರರ ಕೊಡುವ ತೀರ್ಪನ್ನು ಎಲ್ಲರೂ ಸ್ವಾಗತಿಸೋಣ ಎಂದರು.