ಅಥಣಿ: ಪಟ್ಟಣದ ಬುಧವಾರ ಪೇಟೆಯಲ್ಲಿರುವ ಶ್ರೀ ಯಶವಂತ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಬ್ಯಾಂಕ್ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿಯನ್ನ ಸುನೀಲ್ ಪಟ್ಟಣಶೆಟ್ಟಿ (47) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುನೀಲ್ ಬ್ಯಾಂಕಿಗೆ ಬಂದು ಬೀಗ ತೆಗೆದು ಒಳ ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕಿಗೆ ಬಂದ ಸೆಕ್ಯುರಿಟಿ ಬಾಗಿಲು ತೆಗೆದು ನೋಡಿದಾಗ ನೇಣು ಬಿಗಿದುಕೊಂಡ ವಿಷಯ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.