ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ಮಿಂಚಿನ ಸರಳುಗಳಂತೆ ಕಾಣಿಸಿಕೊಂಡ ಉಲ್ಕಾಪಾತ: ವಿಡಿಯೋ ವೈರಲ್