ಬಳ್ಳಾರಿ: ಇಲ್ಲಿನ ವಿಮ್ಸ್ನಲ್ಲಿ ಮತ್ತೆ 7 ಜನ ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಈವರೆಗೆ ಒಟ್ಟು 21 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದಂತಾಗಿದೆ.
ಕಲ್ಯಾಣ ಕರ್ನಾಟಕದ ಸಂಜೀವಿನಿ ಎಂದು ಕರೆಯಿಸಿಕೊಳ್ಳುವ ವಿಮ್ಸ್ನ ದ್ವಿತೀಯ ಹಾಗೂ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದರಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದರು. ಪರೀಕ್ಷೆ ಮುಗಿದ ಬಳಿಕ ಮರಳಿ ಕಾಲೇಜ್ ಬಂದಾಗ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ, ಕೋವಿಡ್ ಪರೀಕ್ಷೆ ನಡೆಸಿದಾಗ ನಿನ್ನೆ ಒಟ್ಟು 14 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಮತ್ತೆ 7 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಅಂದಾಜು 100 ಮಂದಿ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ಮಾಡಿದ್ದು, 21 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.