ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಳಿದ 860 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಟ ನಡೆಸುವವರ ತೀವ್ರ ನಿಗಾ ವಹಿಸಿರುವ ಜಿಲ್ಲಾ ಪೊಲೀಸರು, ಅನಗತ್ಯ ಸಂಚಾರ ನಡೆಸುತ್ತಿರುವ ವಾಹನ ಸವಾರರಿಂದ ದಂಡ ಶುಲ್ಕ ವಸೂಲಿ ಮಾಡೋದರ ಜೊತೆಗೆ ವಾಹನಗಳ ಜಪ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಆದರೂ ಕೂಡ ಕೆಲವರು ನಿಯಮ ಉಲ್ಲಂಘಿಸುತ್ತಿದ್ದಾರೆ.
ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಅನಗತ್ಯವಾಗಿ ಓಡಾಡತ್ತಿದ್ದ ಅಂದಾಜು 480 ವಾಹನಗಳನ್ನ ಜಪ್ತಿ ಮಾಡಲಾಗಿದ್ದು, 22 ಎಫ್ಐಆರ್ ದಾಖಲು ಮಾಡಲಾಗಿದೆ. ಗುರುವಾರ 380 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, 29 ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಎಸ್ಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಕೋವಿಡ್ನಿಂದ ನಿಧನ