ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ 5 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಹಕಾರದಿಂದ ಚಿಕಿತ್ಸೆಗಾಗಿ ಖಾನಾಹೊಸಳ್ಳಿ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತಕ್ಕೆ ಒಳಗಾದವರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಓದಿ: ವಿಧವೆ ಮೇಲೆ ಅತ್ಯಾಚಾರ, ಕೊಲೆ: ಆತ್ನಹತ್ಯೆಗೆ ಯತ್ನಿಸಿದ ಆರೋಪಿ ಅರೆಸ್ಟ್