ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿ ವ್ಯಾಪ್ತಿಯ ಹಾರೋವನಹಳ್ಳಿ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಹಾರೋವನಹಳ್ಳಿಯತ್ತ ಬರುತ್ತಿದ್ದ ಕಾರೊಂದರ ಟೈಯರ್ ಸ್ಫೋಟಗೊಂಡಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಇನ್ನೊಂದು ಸರ್ಕಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 4 ಮಂದಿ ಮೃತಪಟ್ಟಿದ್ದು, 8 ಜನರಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಕೃಷ್ಣ ಜಲ ಭಾಗ್ಯ ಮಂಡಳಿಯ ಅಧಿಕಾರಿಗಳಾದ ಕೋದಂಡ ರಾಮಸ್ವಾಮಿ ( 55), ಜಿತೇಂದ್ರಪ್ಪ ಪನ್ವರ್ ( 50) ಹಾಗೂ ಖಾಸಗಿ ಕಾರಿನಲ್ಲಿದ್ದ ಕಾವ್ಯ (35) ಮತ್ತು ಶರಣ ಬಸವ (10) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆ ಮತ್ತು ಬಳ್ಳಾರಿ ವಿಮ್ಸ್ಗೆ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.