ಬಳ್ಳಾರಿ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಹತ್ತಿರ ಹೆದ್ದಾರಿ 50ರಲ್ಲಿ ಸಂಭವಿಸಿದೆ.
ಭರಮ್ಮಪ್ಪ ಎಂಬಾತನೆ ಮೃತ ಬೈಕ್ ಸವಾರ. ಈತ ಬೆಂಗಳೂರಿನಿಂದ ಕುಷ್ಟಗಿಗೆ ಹೋಗುತ್ತಿದ್ದಾಗ ಬಣವಿಕಲ್ಲು ಬಳಿ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪಿದ್ದಾನೆ. ಗಾಯಗೊಂಡ ಮತ್ತೋರ್ವನನ್ನು ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಅಪಘಾತದ ವೇಳೆ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತ್ತು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.